ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ…

52
firstsuddi

ಬೆಂಗಳೂರು : ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿದೆ. ಅದರಂತೆ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ.

ಇತ್ತೀಚೆಗಷ್ಟೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು.