ಅತ್ಯಾಚಾರಿಗಳ ಎನ್‍ಕೌಂಟರ್ ಪ್ರಕರಣ-ತನಿಖಾ ಸಮಿತಿ ರಚಿಸಿದ ಸುಪ್ರೀಂ…

194
firstsuddi

ನವದೆಹಲಿ : ಹೈದರಾಬಾದ್ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್‍ಕೌಂಟರ್ ಮಾಡಿದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೂವರು ಸದಸ್ಯರ ವಿಚಾರಣಾ ಸಮಿತಿಯನ್ನು ನೇಮಕ ಮಾಡಿದೆ. ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಎನ್‍ಕೌಂಟರ್ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠ ನಿವೃತ್ತಿ ನ್ಯಾಯಾಮೂರ್ತಿ ವಿ.ಎಸ್. ಸಿರ್ಪೂರ್ಕರ್ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ನೇಮಿಸಿ ಆದೇಶ ಹೊರಡಿಸಿದ್ದು, ಮುಂದಿನ ಆರು ತಿಂಗಳಲ್ಲಿ ತನಿಖೆ ಮುಕ್ತಾಯಗೊಳಿಸುವಂತೆ ಆದೇಶದಲ್ಲಿ ಸೂಚಿಸಿದೆ. ಅಲ್ಲದೇ ತೆಲಂಗಾಣ ಸರ್ಕಾರಕ್ಕೆ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೂಚನೆಯನ್ನು ನೀಡಿದೆ.