ಕೇಂದ್ರ ದೆಹಲಿಯಲ್ಲಿರುವ ಅಧಿಕೃತ ನಿವಾಸ ತೊರೆದ ರಾಹುಲ್ ಗಾಂಧಿ.

61
firstsuddi

ನವದೆಹಲಿ: ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೊರೆದಿದ್ದಾರೆ.

ರಾಹುಲ್ ಗಾಂಧಿ ಮತ್ತು ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ ಭೇಟಿ ನೀಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ರಾಹುಲ್ ಗಾಂಧಿ ಕೀಗಳನ್ನು ಹಸ್ತಾಂತರಿಸಿದ್ದಾರೆ. 2005ರಿಂದ ರಾಹುಲ್ ಬಂಗಲೆಯಲ್ಲಿ ವಾಸಿಸುತ್ತಿದ್ದರು.

ದೆಹಲಿಯಲ್ಲಿರುವ 12 ತುಘಲಕ್ ಲೇನ್​​ನಲ್ಲಿರುವ ಬಂಗಲೆಯನ್ನು ಏಪ್ರಿಲ್ 22ರೊಳಗೆ ಖಾಲಿ ಮಾಡಬೇಕು ಎಂದು ಬಿಜೆಪಿ ಸಂಸದ ಸಿ.ಆರ್. ಪಾಟೀಲ್ ನೇತೃತ್ವದ ಲೋಕಸಭೆಯ ವಸತಿ ಸಮಿತಿಯು ನೋಟಿಸ್ ನೀಡಿತ್ತು.

ವರದಿಯ ಪ್ರಕಾರ, ರಾಹುಲ್ ಗಾಂಧಿಯವರ ವಸ್ತುಗಳನ್ನು ಅವರ ತಾಯಿ ಸೋನಿಯಾ ಗಾಂಧಿಯವರ 10 ಜನಪಥ್ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ. ಪ್ರೋಟೊಕಾಲ್ ಪ್ರಕಾರ ರಾಹುಲ್ ಈ ವಸತಿ ತೊರೆಯಬೇಕಿದೆ. ಆದಾಗ್ಯೂ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಾಜಕೀಯ ಸೇಡಿನ ಆರೋಪ ಮಾಡಿದ್ದಾರೆ.