ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಹಾರ್ದಿಕ್ ಪಟೇಲ್.

90
firstsuddi

ಗಾಂಧಿನಗರ : ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಗುಜರಾತ್ ಯುವ ರಾಜಕಾರಣಿ ಹಾರ್ದಿಕ್ ಪಟೇಲ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಡಪೆಯಾಗಿದ್ದಾರೆ.

ಗುಜರಾತ್ ನ ಗಾಂಧಿನಗರದಲ್ಲಿ ಆಯೋಜನೆ ಮಾಡಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಗುಜರಾತ್ ಘಟಕದ ಮುಖ್ಯಸ್ಥ ಸಿ ಆರ್ ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಇತರೆ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಪಕ್ಷ ಸೇರ್ಪಡೆ ನಂತರ ಮಾತನಾಡಿರುವ ಹಾರ್ದಿಕ್ ಪಟೇಲ್, ಇಂದಿನಿಂದ ಹೊಸದೊಂದು ಅಧ್ಯಾಯ ಆರಂಭಿಸುತ್ತಿದ್ದೇನೆ. ಪಕ್ಷದಲ್ಲಿ ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ. ನಾವು ಪ್ರತಿ 10 ದಿನಕ್ಕೊಮ್ಮೆ ಕಾರ್ಯಕ್ರಮ ಮಾಡುತ್ತೇವೆ, ಇದರಲ್ಲಿ ಕಾಂಗ್ರೆಸ್ ಜೊತೆ ಅತೃಪ್ತ ಶಾಸಕರು ಸೇರಿದಂತೆ ಕಾರ್ಯಕರ್ತರನ್ನ ಬಿಜೆಪಿಗೆ ಕರೆತರುವ ಕೆಲಸ ಮಾಡಲಾಗುವುದು ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಕೆಲಸ ಮಾಡಲು ಇಷ್ಟವಿಲ್ಲ ಎಂದಿದ್ದಾರೆ.

ಪಕ್ಷ ಸೇರ್ಪಡೆಗೂ ಮುಂಚಿತವಾಗಿ ಟ್ವೀಟ್ ಮಾಡಿದ್ದ ಹಾರ್ದಿಕ್ ಪಟೇಲ್, ರಾಷ್ಟ್ರೀಯ, ರಾಜ್ಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಾಮಾಜಿಕ ಹಿತಾಸಕ್ತಿ ಜೊತೆಗೆ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರ ಸೇವೆಯಲ್ಲಿನ ಬೃಹತ್ ಕಾರ್ಯದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಬರೆದುಕೊಂಡಿದ್ದರು.ಭಾರತೀಯ ಜನತಾ ಪಾರ್ಟಿ ಸೇರ್ಪಡೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ತಮ್ಮ ಅಹಮದಾಬಾದ್ ನಿವಾಸದಲ್ಲಿ ಹಾರ್ದಿಕ್ ಪಟೇಲ್ ವಿಶೇಷ ಪೂಜೆ ಸಲ್ಲಿಸಿದ್ದರು.