ಅನಧಿಕೃತ ಫ್ಲೆಕ್ಸ್ ಅಳವಡಿಕೆ – ನಲಪಾಡ್ ವಿರುದ್ಧ ಎಫ್‍ಐಆರ್…

89
firstsuddi

ಬೆಂಗಳೂರು : ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರ್ಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಬಿ.ಕೆ ಹರಿಪ್ರಸಾದ್ ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಈ ಬಗ್ಗೆ ಕ್ರಮ ವಹಿಸಬೇಕಾಗಿ ಬಿಬಿಎಂಪಿ ಕಂದಾಯ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು. ಇದೀಗ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಬಿಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಫ್ಲೆಕ್ಸ್ ಅಳವಡಿಕೆ ಮಾಡಿದ್ದ ನಲಪಾಡ್ ಅಂಡ್ ಟೀಂ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.