ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಸಾವು…

218
firstsuddi

ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ಯೋಧರೊಬ್ಬರು ನಿನ್ನೆ ಕಾಶ್ಮೀರದಲ್ಲಿ ಮೃತಪಟ್ಟಿದ್ದು, ತಾಲ್ಲೂಕಿನ ದುದ್ದ ಗ್ರಾಮದ ದೇವರಾಜು(24) ಮೃತ ಯೋಧ ಎನ್ನಲಾಗಿದ್ದು, ಕಳೆದ ಎರಡು ವರ್ಷದ ಹಿಂದೆ ಭಾರತೀಯ ಸೇನೆ ಸೇರಿದ್ದರು. ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಹಿನ್ನೆಲೆ ಗಡಿ ಕಾಯುವ ಕೆಲಸದಿಂದ ಕಚೇರಿಗೆ ವರ್ಗಾವಣೆ ಮಾಡಿದ್ದು, ಕಾಶ್ಮೀರದಲ್ಲಿರುವ ಸೇನಾ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಯೋಧ ದೇವರಾಜು ಅವರ ಪಾರ್ಥೀವ ಶರೀರ ನಾಳೆ ಹುಟ್ಟೂರಾದ ದುದ್ದ ಗ್ರಾಮಕ್ಕೆ ಆಗಮಿಸಲಿದೆ ಎಂದು ತಿಳಿದು ಬಂದಿದೆ.