ಹಾಸನ : ಅನುಮಾನಾಸ್ಪದ ವ್ಯಕ್ತಿಗಳಿಂದ ಬಂದೂಕು ತೋರಿಸಿ ಬೆದರಿಕೆ ಒಡ್ಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಘಟ್ಟದಲ್ಲಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದು, ಎರಡು ದಿನಗಳ ಹಿಂದೆ ಹಾಸನ ಮಂಗಳೂರು ನಡುವಿನ ರೈಲ್ವೆ ಹಳಿಯ ಯಡಮೇರಿ ಬಳಿ ರೈಲ್ವೆ ಸಿಬ್ಬಂದಿಗೆ ಬಂದೂಕು ತೋರಿಸಿ ಅಪರಿಚಿತರು ಬೆದರಿಸಿದ್ದರು. ನಕ್ಸಲರು ಇರಬಹುದು ಎಂಬ ಅನುಮಾನದಿಂದ ಅರಣ್ಯ ಇಲಾಖೆ, ರೈಲ್ವೆ ಪೊಲೀಸ್ ಹಾಗೂ ಸಕಲೇಶಪುರ ಗ್ರಾಮಾಂತರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.









