ಧಾರವಾಡ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ.
ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು, ಭೀಮಪ್ಪ ಕರಿಸಿದ್ದಣ್ಣವರ (30) ಕೊಲೆಯಾದ ವ್ಯಕ್ತಿ. ಭಿಮಪ್ಪನ ಪತ್ನಿ ಕಾವೇರಿ ಮತ್ತು ಆಕೆಯ ಪ್ರಿಯಕರ ಶಿವು ನಿಂಗೋಜಿ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಕಾವೇರಿ, ನಿಂಗೋಜಿ ಕಳೆದ ನಾಲ್ಕು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗ್ತಿದೆ.
ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.










