ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಕೆ.ಬಿ. ಸಿದ್ದಯ್ಯ ನಿಧನ…

198
firstsuddi

ತುಮಕೂರು : ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಕೆ.ಬಿ. ಸಿದ್ದಯ್ಯ(70) ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಯ್ಯ ಅವರು ಶಿವಮೊಗ್ಗದ ಸುಗ್ಗನಹಳ್ಳಿ-ಕೆಂಕೆರೆ ಬಳಿ ಇರುವ ತಮ್ಮ ತೋಟಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಯ್ಯ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸಿದ್ದಯ್ಯ ಅವರು ದಕ್ಕಲ ಕಥಾದೇವಿ, ಗಲ್ಲೆಭಾನಿ ಸೇರಿದಂತೆ ಹಲವಾರು ಖಂಡಕಾವ್ಯವನ್ನು ರಚಿಸಿದ್ದು, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿ ದೊರಕಿದೆ. ಸಿದ್ದಯ್ಯ ಅವರು ತಮ್ಮ ಪತ್ನಿ, ಪುತ್ರ, ಪುತ್ರಿ ಹಾಗೂ ಶಿಷ್ಯ ವೃಂದವನ್ನು ಬಿಟ್ಟು ಅಗಲಿದ್ದಾರೆ.