ಅಪರಿಚಿತ ವಾಹನ ಡಿಕ್ಕಿ : ಜಾನುವಾರು ಸಾವು…

66
firstsuddi

ಕೊಟ್ಟಿಗೆಹಾರ : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಾನುವಾರು ಮೃತಪಟ್ಟ ಘಟನೆ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ.

ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಗೆರೆ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಾನುವಾರು ಸ್ಥಳದಲ್ಲೇ ಮೃತಪಟ್ಟಿದೆ. ಅತ್ತಿಗೆರೆ ಗ್ರಾಮಸ್ಥರು ಜಾನುವಾರಿನ ಅಂತ್ಯಸಂಸ್ಕಾರವನ್ನು ನೆರವೇರಿಸಿದರು. ಬಣಕಲ್ ಕೊಟ್ಟಿಗೆಹಾರ ಭಾಗದಲ್ಲಿ ವಾಹನ ಡಿಕ್ಕಿಯಾಗಿ ಜಾನುವಾರುಗಳು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ಬಿಡಾಡಿ ದನಗಳು ರಾತ್ರಿ ಸಮಯದಲ್ಲಿ ಮಲಗುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.