ಕೊಟ್ಟಿಗೆಹಾರ: ವಿಲ್ಲುಪುರಂ ಮಂಗಳೂರು ಹೆದ್ದಾರಿಯ ಬಣಕಲ್ ಸಮೀಪದ ಚಕ್ಕಮಕ್ಕಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸುಮಾರು ನಾಲ್ಕು ವರ್ಷದ ಜಿಂಕೆಯೊಂದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಮಂಗಳವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕೂಡಲೇ ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಪಶುವೈದ್ಯಾಧಿಕಾರಿ ರಮಿತ್ ಮರಣೋತ್ತರ ಪರೀಕ್ಷೆ ನಡೆಸಿ ಶವ ಸಂಸ್ಕಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಪ್ರಸಾದ್, ಉಪವಲಯ ಅರಣ್ಯಾಧಿಕಾರಿ ಉಮೇಶ್, ಪಶು ವೈದ್ಯಾಧಿಕಾರಿ ರಮಿತ್, ಅರಣ್ಯ ರಕ್ಷಕ ಮೋಸಿನ್, ನಾಗರಾಜ್ ಇದ್ದರು.










