ಸೇತುವೆ ಮೇಲಿಂದ ಗೂಡ್ಸ್ ವಾಹನ ಕೆಳಗೆ ಬಿದ್ದು 7 ಮಂದಿ ಸಾವು-ಪ್ರಧಾನಿ ಮೋದಿ ಸಂತಾಪ…

172
firstsuddi

ಶಿಮ್ಲಾ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದು 7 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಗೂಡ್ಸ್ ವಾಹನ ಚಾಲಕ ತನ್ನ ಮುಂದೆ ಚಲಿಸುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ವಾಹನ ಸೇತುವೆ ಮೇಲಿಂದ ಸುಕೇತಿ ಖುದ್ ನದಿಗೆ ಬಿದ್ದಿದ್ದು, ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗೂಡ್ಸ್ ವಾಹನ ಚಾಲಕನ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279, ಸೆಕ್ಷನ್ 338, ಮತ್ತು ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳನ್ನು ತೆಗೆದುಕೊಳ್ಳುತ್ತದೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.