ಅಪರಿಚಿತ ವ್ಯಕ್ತಿಗಳಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ…

172
firstsuddi

ಬೆಳಗಾವಿ : ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಮಕನಮರಡಿಯಲ್ಲಿ ನಡೆದಿದೆ. ಭರಮಾ ಧೂಪದಾಳೆ ಹಾಗೂ ಕಿರಣ್ ರಜಪೂತ ಗುಂಡಿನ ದಾಳಿಗೆ ಒಳಗಾಗಿರುವ ಕಾರ್ಯಕರ್ತರು. ಮಾಸ್ಕ್ ಧರಿಸಿಕೊಂಡು ಬಂದ ಅಪರಿಚಿತ ವ್ಯಕ್ತಿಗಳು ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಭರಮಾ ಧೂಪದಾಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನೆಲೆ ಹಳೆಯ ವೈಷಮ್ಯದಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.