ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ…

51
firstsuddi

ಮಣಿಪಾಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನ.5ರಂದು ನಡೆದಿದೆ.

ಮೃತರನ್ನು ಸರಳೇಬೆಟ್ಟು ಹೈಪಾಯಿಂಟ್ ಹೈಟ್ಸ್ ವಸತಿ ಸಮುಚ್ಚಯದ ನಿವಾಸಿ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು.

ಜೀವನದಲ್ಲಿ ಜಿಗುಪ್ಸೆಗೊಂಡು ಪ್ರಜ್ಞಾ ಎಂಟನೇ ಮಹಡಿಯ ಬಾಲ್ಕನಿಯಿಂದ ಹಾರಿದ್ದಾರೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.