ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ 26 ಮಂದಿ ಸಾವು…

69
firstsuddi

ಕಾಬೂಲ್ : ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ ರಿಕ್ಟರ್ ಮಾಪಕದಲ್ಲಿ ಭೂಕಂಪವು 5.3 ತೀವ್ರತೆ ದಾಖಲಾಗಿದೆ. ಭೂಕಂಪದಲ್ಲಿ ಸಾವನ್ನಪ್ಪಿದ 26 ಜನರಲ್ಲಿ ಐದು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ. ಇನ್ನೂ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಾದ್ಘಿಸ್ ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್ ಪಿಗೆ ತಿಳಿಸಿದ್ದಾರೆ.

ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ ಗಳ ಜಂಕ್ಷನ್ ನ ಸಮೀಪವಿರುವ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಿರುತ್ತವೆ.