ಅಪ್ಪು ಕನಸಿನ ‘ಗಂಧದ ಗುಡಿ’ ಟೈಟಲ್ ಟೀಸರ್ ರಿಲೀಸ್…

106
firstsuddi

ಬೆಂಗಳೂರು : ದಿ.ನಟ ಪುನೀತ್ ರಾಜ್‍ಕುಮಾರ್ ಅವರ ಕನಸು ಇಂದು ನನಸಾಗಿದೆ. ‘ಗಂಧದ ಗುಡಿ’ ಡಾಕ್ಯುಮೆಂಟರಿಯ ಟೈಟಲ್ ಟೀಸರ್ ಬಿಡುಗಡೆ ಆಗಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಪಿಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸುತ್ತಿದೆ.

ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಆ ಟೀಸರ್ ರಿಲೀಸ್ ಮಾಡಬೇಕು ಎಂದು ಪುನೀತ್ ಕನಸು ಕಂಡಿದ್ದರು. ಆದರೆ, ಕನಸು ನನಸಾಗುವ ಮೊದಲೇ ಅವರು ಮೃತಪಟ್ಟರು. ಈ ಕಾರಣಕ್ಕೆ ಆ ಟೀಸರ್ ರಿಲೀಸ್ ಆಗಿಲ್ಲ. ಇಂದು ಆ ಟೀಸರ್ ರಿಲೀಸ್ ಆಗುತ್ತಿದೆ.

ಈ ಬಗ್ಗೆ ಪುನೀತ್, ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಷ್ಟೇ ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್ನ ಫೋಟೊವೊಂದರ ಜೊತೆ ಅಶ್ವಿನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಡಾಕ್ಯುಮೆಂಟರಿ ಬಿಡುಗಡೆಯ ಸುಳಿವು ನೀಡಿದ್ದರು.