ಅಪ್ಪು ಸದಾ ಜೀವಂತವಾಗಿದ್ದಾರೆ : ಅಶ್ವಿನಿ ಪುನೀತ್ ರಾಜ್​ಕುಮಾರ್ ಭಾವುಕ ಪತ್ರ…

93
firstsuddi

ನಟ ಪುನೀತ್ ರಾಜ್ ಕುಮಾರ್ ಅವರು ನಿಧನ ಹೊಂದಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಪುನೀತ್ ಅವರ ಮೊದಲ ವರ್ಷದ ಪುಣ್ಯತಿಥಿಯಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಗೆ ಪುನೀತ್ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಭಾವುಕ ಪತ್ರ ಬರೆದಿದ್ದಾರೆ.

ನೆನಪಿನ ಸಾಗರದಲ್ಲಿ ಎಂಬ ಸಾಲುಗಳೊಂದಿಗೆ ಪತ್ರ ಆರಂಭಿಸಿದ್ದಾರೆ ಅಶ್ವಿನಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಬರೆದಿದ್ದಾರೆ.