ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಶಿಕ್ಷಕ, ವ್ಯವಸ್ಥಾಪಕ!

71
firstsuddi

ಲಕ್ನೋ : ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಶಿಕ್ಷಕ ಹಾಗೂ ಮ್ಯಾನೇಜರ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ 3ನೇ ತರಗತಿ ವ್ಯಾಸಂಗ ಮಾಡ್ತಿದ್ದ ಬಾಲಕಿ ಮೇಲೆ ಶಿಕ್ಷಕ ಮತ್ತು ಮ್ಯಾನೇಜರ್ ಈ ಕೃತ್ಯವೆಸಗಿದ್ದಾರೆ. ಶಾಲೆಯಿಂದ ಮನೆಗೆ ಬಂದ ಬಳಿಕ ನಡೆದ ಘಟನೆಯನ್ನೆಲ್ಲಾ ಪೋಷಕರಿಗೆ ವಿವರಿಸಿದ್ದಾಳೆ. ಬಳಿಕ ಬಾಲಕಿ ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾರೆ. ಈ ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳ ಮಕ್ಕಳ ರಕ್ಷಣೆ(ಪೋಕ್ಸೊ)ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೋಸ್ಕರ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.