ತುಮಕೂರು : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಲ್ ಐಸಿ ಬಾಂಡ್ ಕುರಿತು ಮಾಹಿತಿ ನೀಡುತ್ತೇವೆ ಎಂದು ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಇದಕ್ಕೆ ಮಹಿಳೆಯೊಬ್ಬಳು ಸಾಥ್ ನೀಡಿದ್ದಾಳೆ ಎನ್ನಲಾಗಿದೆ.
10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇರೆಗೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.










