ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – 65 ವರ್ಷದ ವೃದ್ಧ ಅರೆಸ್ಟ್!

77
firstsuddi

ಉಡುಪಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ 65 ವರ್ಷ ಪ್ರಾಯದ ವೃದ್ಧನನ್ನು ಬಂಧಿಸಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅನಂತ ಸೇರಿಗಾರ್ ಬಂಧಿತ ಆರೋಪಿ. 11 ವರ್ಷದ ಅಪ್ರಾಪ್ತ ಬಾಲಕಿ ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಲಾಗಿತ್ತು. ತಕ್ಷಣ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಬಾಲಕಿಯ ಮನೆಗೆ ಭೇಟಿ ನೀಡಿ ಅಪ್ರಾಪ್ತೆಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು. ಬಳಿಕ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಗಿತ್ತು.

ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.