ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು, ಬಂಧನ…

114
firstsuddi

ಉಡುಪಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಗುಲ್ವಾಡಿಯ ಇಮ್ರಾನ್ (24) ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಕುರಿತು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದ ಹಿನ್ನಲೆಯಲ್ಲಿ ಆಕೆಯ ಮನಗೆ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು. ಅದರಂತೆ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ಮಧು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.