ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು!

104
firstsuddi

ಚಂಢಿಗಡ : ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿರುವ ಕಾಮುಕರು ಬಳಿಕ ಕೊಲೆಗೈದಿರುವ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದೆ.

 ಮೃತ ಸಹೋದರಿಯರು 14 ಮತ್ತು 16 ವರ್ಷ ವಯಸ್ಸಿನವರಾಗಿದ್ದು ತಮ್ಮ ತಾಯಿಯೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದರು. ಬಾಲಕಿಯರ ಮನೆಯ ಪಕ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ನಾಲ್ವರು ಯುವಕರು ಸಹೋದರಿಯರ ಮೇಲೆ  ಅತ್ಯಾಚಾರ  ಎಸಗಿದ್ದಾರೆ. ಆಗಸ್ಟ್ 5ರ ರಾತ್ರಿ ಈ ಕೃತ್ಯ ನಡೆದಿದ್ದು, ಅತ್ಯಾಚಾರ ಎಸಗಿರುವ ಕಾಮುಕರು ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಇಬ್ಬರು ಸಹೋದರಿಯರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನೀಡುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಇವರ ಮೇಲೆ ದುಷ್ಕೃತ್ಯ ನಡೆದಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಗೊತ್ತಿಲ್ಲದ ಕಾರಣ ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಆದರೆ ಅನುಮಾನ ಬಂದಿರುವ ಕಾರಣ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಈ ವೇಳೆ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಎಫ್ ಐಆರ್ ದಾಖಲಿಸಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕುಂಡ್ಲಿ ಪೊಲೀಸ್ ಠಾಣೆಯ ಎಸ್ ಎಚ್ ಒ ರವಿಕುಮಾರ್ ತಿಳಿಸಿದ್ದಾರೆ.