ಅಪ್ರಾಪ್ತೆ ಮೇಲೆ ಅತ್ಯಾಚಾರ – ಇಸ್ಲಾಂಗೆ ಮತಾಂತರವಾದ್ರೆ ಮದುವೆ ಆಗ್ತೀನಿ ಎಂದ ಪಾಪಿ…

89
firstsuddi

ಮಂಡ್ಯ : ಮುಸ್ಲಿಂ ವಿವಾಹಿತನೊಬ್ಬ ಹಿಂದೂ ಧರ್ಮದ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ತನ್ನ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವುದಾಗಿ ಆಸೆ ತೋರಿಸಿರುವ ಪ್ರಕರಣವೊಂದು ಜಿಲ್ಲೆಯ ನಾಗಮಂಗಲದಲ್ಲಿ ಬೆಳಕಿಗೆ ಬಂದಿದೆ.

ಆರೋಪಿಯನ್ನು 25 ವರ್ಷದ ಯೂನಸ್ ಫಾಷ ಎಂದು ಗುರುತಿಸಲಾಗಿದೆ. ಎದುರು ಮನೆಯಲ್ಲೇ ವಾಸವಿದ್ದ ಬಾಲಕಿಯ ಸ್ನೇಹ ಸಂಪಾದಿಸಿದ್ದ ಯೂನಸ್ ಪಾಷ, ಹೆತ್ತವರಿಗೆ ತಿಳಿಯದಂತೆ ಮೊಬೈಲ್ ಕೊಡಿಸಿದ್ದ. ಬಳಿಕ ಮೆಸೆಜ್ ಮಾಡಲು ಆರಂಭಿಸಿದ್ದಲ್ಲದೆ ವಿಡಿಯೋ ಕಾಲ್ ಮಾಡುತ್ತಿದ್ದನು. ಹೀಗೆ ಬಾಲಕಿಯನ್ನು ಪುಸಲಾಯಿಸಿ ಬೆತ್ತಲೆ ವೀಡಿಯೋ ರೆಕಾರ್ಡ್ ಮಾಡಿಕೊಂಡಿದ್ದ. ಖಾಸಗಿ ಅಂಗದ ವಿಡಿಯೋ ರೆಕಾರ್ಡ್ ಮುಂದಿಟ್ಟುಕೊಂಡು ಲೈಂಗಿಕ ಕ್ರಿಯೆಗೆ ಸಮ್ಮತಿಸಬೇಕು, ಇಲ್ಲದಿದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲು ಆರಂಭಿಸಿದ್ದಾನೆ.

ಬಾಲಕಿಯ ತಂದೆ ನವೆಂಬರ್ 8 ರಂದು ಶಿರಡಿಗೆ ಹೋಗಿದ್ದರು. ಈ ವೇಳೆ ತಾಯಿಯೊಂದಿಗೆ ಅಜ್ಜಿ ಮನೆಗೆ ಹೋಗಿದ್ದ ಬಾಲಕಿಗೆ ನಿದ್ರೆ ಮಾತ್ರೆಯನ್ನು ಪುಡಿ ಮಾಡಿ ನೀಡಿದ್ದ ಯೂನಸ್, ನವೆಂಬರ್ 11ರ ರಾತ್ರಿ ಸಾಂಬಾರಿಗೆ ಹಾಕಿಸಿದ್ದ. ಬಳಿಕ ಮನೆಯೊಳಗೆ ಬಂದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆದಾದ ಬಳಿಕ ಬಾಲಕಿಯ ನಡುವಳಿಕೆಯಲ್ಲಾದ ಬದಲಾವಣೆ ಗಮನಿಸಿದ ಪೋಷಕರು ವಿಚಾರಿಸಿದಾಗ ಅತ್ಯಾಚಾರ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ನ.19ರಂದು ಬಾಲಕಿಯ ತಂದೆ ದೂರು ನೀಡಿದ್ದು, ಸದ್ಯ ಪೊಲೀಸರು ಯೂನಸ್ ಪಾಷನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.