ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪ: ತನಿಖೆಗೆ SIT ರಚಿಸಿ.

24

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ 700 ಕೋಟಿ ರೂ. ಭ್ರಷ್ಟಾಚಾರ ಆರೋಪ ಕುರಿತು ಎಸ್‍ಐಟಿ ರಚನೆ ಮಾಡಿ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆಗ್ರಹಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊರಿಸಿದ್ದ ಶೇ.40ರಷ್ಟು ಕಮಿಷನ್ ಆರೋಪವನ್ನು ಲೋಕಾಯುಕ್ತ ಸಂಸ್ಥೆ ಸುಳ್ಳೆಂದು ಸಾಬೀತು ಮಾಡಿದೆ. ರಾಜ್ಯದ ಜನರಿಗೆ ಶೇ 40 ಪಸೆರ್ಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊರಿಸಿದ್ದ ಶೇ.40ರಷ್ಟು ಕಮಿಷನ್ ಆರೋಪವನ್ನು ಲೋಕಾಯುಕ್ತ ಸಂಸ್ಥೆ ಸುಳ್ಳೆಂದು ಸಾಬೀತು ಮಾಡಿದೆ. ರಾಜ್ಯದ ಜನರಿಗೆ ಶೇ 40 ಪಸೆರ್ಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ ಎಂದು ಕಿಡಿಕಾರಿದರು. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ತಮ್ಮ 40 ವರ್ಷದ ಜೀವನ ತೆರೆದ ಪುಸ್ತಕ ಅಂದವರು. ಇವತ್ತು ಅವರ ತೆರೆದ ಪುಸ್ತಕ ಪುಟಗಳು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ ತಿಳಿಸಿದರು.