ಅಮಾನವೀಯ ಕೃತ್ಯ : ಮೂರು ತಿಂಗಳ ನವಜಾತ ಶಿಶು ಮೇಲೆ ಅತ್ಯಾಚಾರ…

69
firstsuddi

ಉತ್ತರಪ್ರದೇಶ : ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.

ಮಗು ಅಳುತ್ತಿರುವ ಶಬ್ಧ ಕೇಳಿ ತಾಯಿ ಬಂದು ನೋಡಿದಾಗ ಮಗುವಿನ ಖಾಸಗಿ ಭಾಗದಲ್ಲಿ ರಸ್ತಸ್ರಾವವಾಗುತ್ತಿರುವುದು ಕಂಡುಬಂದಿದೆ. ತಕ್ಷಣವೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ವೈದ್ಯರು ಬೇರೆ ಕಡೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ.