ಗಾಂಧಿನಗರ : ಅಮುಲ್ ಬ್ರ್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (ಜಿಸಿಎಂಎಂಎಫ್) ಮತ್ತೆ ಹಾಲಿನ ದರ ಏರಿಕೆ ಮಾಡಿದೆ. ಹಾಲಿನ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ಈ ದರ ಇದಿನಿಂದಲೇ ಜಾರಿಗೆ ಬರಲಿದೆ.
ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟರ್‌ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 70 ರೂ.ಗಳಿಗೆ ಏರಿಕೆ ಕಂಡಿದೆ.
ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ 2 ರೂಪಾಯಿಯಷ್ಟು ಬೆಲೆ ಹೆಚ್ಚಳ ಮಾಡಿತ್ತು. ಕಳೆದ ಒಂದೆರಡು ತಿಂಗಳಿಂದಲೂ ಅಮೂಲ್ ಹಾಲಿನ ಬೆಲೆ ಹೆಚ್ಚಳದ ನಿರೀಕ್ಷೆ ಇತ್ತು. ಇದೀಗ ಇಂದಿನಿಂದ ಜಾರಿಗೆ ಬರುವಂತೆ ಅಮುಲ್ ಹಾಲಿನ ಬೆಲೆಯನ್ನು ಪರಿಷ್ಕರಿಸಿದೆ.
ಹಾಲಿನ ಉತ್ಪಾದನೆ ಮತ್ತು ಕಾರ್ಯನಿರ್ವಹಣೆಯ ವೆಚ್ಚ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ದನಗಳ ಮೇವಿನ ದರ ಶೇ. 20ರಷ್ಟು ಹೆಚ್ಚಾಗಿದೆ. ಇದರಿಂದ ಗ್ರಾಹಕರಿಗೆ ಹಾಲಿನ ಬೆಲೆ ಹೆಚ್ಚಿಸುವುದು ಅನಿವಾರ್ಯ ಎಂದು ಅಮೂಲ್ ತನ್ನ ಬೆಲೆ ಏರಿಕೆ ಕ್ರಮವನ್ನು ಸಮರ್ಥನೆ ಮಾಡಿಕೊಂಡಿದೆ.










