ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ಬಗ್ಗೆ ಇಂದು ಮುಂಜಾನೆ ಟ್ರಂಪ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. “ ನನಗೆ ಮತ್ತು ಮೆಲಾನಿಯಾಗೆ ಕೊರೊನಾ ಪಾಸಿಟಿವ್ ಬಂದಿದೆ. ನಾವಿಬ್ಬರೂ ಕ್ವಾರಂಟೈನ್‍ನಲ್ಲಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ
Tonight, @FLOTUS and I tested positive for COVID-19. We will begin our quarantine and recovery process immediately. We will get through this TOGETHER!
— Donald J. Trump (@realDonaldTrump) October 2, 2020










