ಅಮ್ಮ ಬುದ್ಧಿ ಹೇಳಿದ್ದೇ ತಪ್ಪಾಯ್ತು.. ನೇಣಿಗೆ ಶರಣಾದ ಬಾಲಕಿ!

92
firstsuddi

ಶಿವಮೊಗ್ಗ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಹನಾ(13) ನೇಣಿಗೆ ಶರಣಾದ ಬಾಲಕಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ತಾಯಿ ಬುದ್ದಿವಾದ ಹೇಳಿದ್ದನ್ನೇ ಮನಸ್ಸಿಗೆ ಗಂಭೀರವಾಗಿ ತೆಗೆದುಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.