ರಾಮಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಯುಪಿ ಸರ್ಕಾರ.

69
firssuddi

ಲಕ್ನೋ : ಅಯೋಧ್ಯೆಯ ‘ಶ್ರೀರಾಮ ಮಂದಿರ’ ಸುತ್ತಮುತ್ತಲೂ ಮದ್ಯ ಮಾರಾಟ ನಿಷೇಧಿಸಿ ಯೋಗಿ ಆದಿತ್ಯನಾಥ್ ಸರ್ಕಾರ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶದ ಅಬಕಾರಿ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರ್ವಾಲ್ ಅವರು ಅಯೋಧ್ಯೆಯ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

2020ರ ಆಗಸ್ಟ್ 5 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು. ಅಂದಿನಿಂದ ದೇವಾಲಯದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಗರ್ಭಗುಡಿಗೆ ಇಂದು ಶಂಕುಸ್ಥಾಪನೆ ಮಾಡಿದ್ದಾರೆ.