ಲಕ್ನೋ : ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
2020ರ ಆಗಸ್ಟ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಮಾಡಿದ್ದು, ಕೆಲಸ ಭರದಿಂದ ಸಾಗಿದೆ. ಇದರ ಬೆನ್ನಲ್ಲೇ ಅಯೋಧ್ಯೆಗೆ ಬೇಟಿ ನೀಡಿದ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಗರ್ಭಗುಡಿಯ ಮೊದಲ ಶಿಲೆಗೆ ಪೂಜೆ ಸಲ್ಲಿಸಿದರು.
ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮಜನ್ಮ ಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನ ಬೆಟ್ಟದಿಂದ ತರಿಸಲಾದ ಬಿಳಿ ಅಮೃತಶಿಲೆಯಿಂದ ನಿರ್ಮಿಸುತ್ತಿದೆ. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆ ಬಳಸುವುದಾಗಿ ಟ್ರಸ್ಟ್ ಹೇಳಿದೆ. ಗರ್ಭಗುಡಿ ಕಾರ್ಯ 2023 ಮತ್ತು ಇಡೀ ದೇಗುಲ ನಿರ್ಮಾಣ ಕಾರ್ಯ 2024ರ ಅಂತ್ಯದೊಳಗೆ ಮುಕ್ತಾಯವಾಗಬಹುದು ಎನ್ನಲಾಗಿದೆ.










