ಹಾಸನ : ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ಶಿವಲಿಂಗೇಗೌಡ ಅವರೇ ವೀಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಕೊರನಾ ಪಾಸಿಟಿವ್ ಬಂದಿದ್ದು, ಆರೋಗ್ಯವಾಗಿದ್ದೇನೆ. ನನ್ನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.










