ಸೇನಾ ಹೆಲಿಕಾಪ್ಟರ್ ಪತನ – ಇಬ್ಬರು ಸಾವು…

32
firstsuddi

ಇಟಾನಗರ : ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಮಿಗ್ಗಿಂಗ್ ಗ್ರಾಮದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡಿದ್ದು, ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ 10:43 ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದುರಂತದಲ್ಲಿ ಮತ್ತೋರ್ವ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಪತನವಾಗಿರುವ ಹೆಲಿಕಾಪ್ಟರ್ ಭಾರತೀಯ ಸೇನೆಗಾಗಿ ಹಿಂದೂಸ್ತಾನ್ ಏರೋನಾಟಿಕಲ್ಸ್ ಲಿಮಿಟೆಡ್ ತಯಾರಿಸಿದೆ. ವರದಿಗಳ ಪ್ರಕಾರ ಅಪಘಾತ ನಡೆದಿರುವ ಸ್ಥಳದಲ್ಲಿ ಅನುಕೂಲಕರ ರಸ್ತೆ ಸಂಪರ್ಕ ಇಲ್ಲ ಎನ್ನಲಾಗಿದೆ. ಇದೀಗ ಶೋಧ ನಡೆಸಲು ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ.