ಇಟಾನಗರ : ಅರುಣಾಚಲ ಪ್ರದೇಶದ ನಹರ್ಲಗುನ್ ಪ್ರದೇಶದಲ್ಲಿ ಇಂದು ದೊಡ್ಡ ಪ್ರಮಾಣದ ಬೆಂಕಿ ಅನಾಹುತ ಸಂಭವಿಸಿದ್ದು, 700 ಅಂಗಡಿಗಳು ಸುಟ್ಟು ಕರಕಲಾಗಿವೆ.
ಎಂದಿನಂತೆ ನಹರ್ಲಗುನ್ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭವಾಗಿತ್ತು. ಬೆಳಗ್ಗೆ ಮರುಕಟ್ಟೆಯಲ್ಲಿನ 2 ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 2 ಗಂಡೆಗಳ ಕಾಲ ಅಂಗಡಿಗಳೂ ಬೆಂಕಿಗೆ ಧಗಧಗಿಸಿದರೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಲಿಲ್ಲ. ಬೆಂಕಿಯ ವೇಗ ಹೆಚ್ಚಿ ಪಕ್ಕದಲ್ಲಿದ್ದ ಅಂಗಡಿಗಳಿಗೂ ವ್ಯಾಪಿಸಿದೆ.
ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.










