ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ.

70
firstsuddi

ಬಹುಭಾಷಾ ನಟಿ ನಮಿತಾ ಕೃಷ್ಣ ಜನ್ಮಾಷ್ಟಮಿ ದಿನದಂದೇ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಶುಭ ಸುದ್ದಿಯನ್ನು ಸ್ವತಃ ನಮಿತಾ ಅವರೇ ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗ ಪಡಿಸಿದ್ದಾರೆ. ಸದ್ಯ ಅವರ ಅವಳಿ ಮಕ್ಕಳ ಫೋಟೋಗಳು ವೈರಲ್ ಆಗಿದ್ದು ಅಭಿಮಾನಿಗಳು, ಹಿತೈಷಿಗಳು ಖುಷಿ ವಿಚಾರ ಹೇಳಿದ್ದಕ್ಕಾಗಿ ಶುಭಾಶಯ ಕೋರುತ್ತಿದ್ದಾರೆ.

2017ರಲ್ಲಿ ಚೆನ್ನೈ ಮೂಲದ ವೀರೇಂದ್ರ ಚೌಧರಿ ಅವರ ಜೊತೆ ನಟಿ ಹಸೆಮಣೆ ಏರಿದ್ದರು. ಇತ್ತೀಚೆಗಷ್ಟೇ ಬೇಬಿ ಬಂಪ್ ಫೋಟೋಗಳನ್ನು ಜಾಲತಾಣದಲ್ಲಿ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿದ್ದರು.

ನಮಿತಾ 2002 ರ ಸೋಂತಂ ಚಿತ್ರದ ಮೂಲಕ ತೆಲುಗಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕನ್ನಡದ ನೀಲಕಂಠ’, ‘ಇಂದ್ರ’, ‘ಹೂ’, ‘ಬೆಂಕಿ ಬಿರುಗಾಳಿ’ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ.