ಅಸ್ಸಾಂನಲ್ಲಿ ಭಾರಿ ಭೂಕುಸಿತ-20 ಮಂದಿ ಸಾವು…

152
firstsuddi

ಅಸ್ಸಾಂ : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ದಕ್ಷಿಣ ಅಸ್ಸಾಂ ಭರಾಕ್ ಕಣಿವೆ ಪ್ರದೇಶದ 3 ಜಿಲ್ಲೆಗಳಲ್ಲಿ ಭಾರಿ ಭೂಕುಸಿತ ಸಂಭವಿಸಿ 20 ಮಂದಿ ಮೃತಪಟ್ಟಿದ್ದಾರೆ. ಅಸ್ಸಾಂನ ಕ್ಯಾಚರ್ ಜಿಲ್ಲೆಯಲ್ಲಿ 7ಮಂದಿ, ಹೈಲಕಂಡಿ ಜಿಲ್ಲೆಯಲ್ಲಿ 7ಮಂದಿ ಹಾಗೂ ಕರಿಮಂಗ್ ಜಿಲ್ಲೆಯಲ್ಲಿ 6ಮಂದಿ ಮೃತಪಟ್ಟಿದ್ದಾರೆ. ಈ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹೀಗಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ 11 ಮಕ್ಕಳು, ಮೂವರು ಮಹಿಳೆಯರು ಸೇರಿದಂತೆ ಒಟ್ಟು 20 ಮಂದಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.