ಅಸ್ಸಾಂನಲ್ಲಿ ಭಾರೀ ಭೂಕಂಪನ ; ಬಿರುಕುಗೊಂಡ ಹಲವು ಕಟ್ಟಡಗಳು…

135
firstsuddi

ಗುವಾಹಟಿ : ಅಸ್ಸಾಂನ ಸೋನಿಪುರ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ 55 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ. ಅಸ್ಸಾಂ ಸೇರಿದಂತೆ ಇಡೀ ಈಶಾನ್ಯ ಭಾಗದಲ್ಲಿ ಭೂಕಂಪನವಾಗಿದೆ.

ಕಂಪನದ ಅನುಭವ ಆಗುತ್ತಿದ್ದಂತೆ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ ಎನ್ನಲಾಗುತ್ತಿದೆ. ರಿಕ್ಟರ್ ಮಾಪಕದಲ್ಲಿ 6.4ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳು ಬಿರುಕುಗೊಂಡಿವೆ ಎಂದು ವರದಿಯಾಗಿದೆ.

ಘಟನೆ ಬಳಿಕ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ರಾಜ್ಯದ ಪ್ರತಿಯೊಬ್ಬ ನಾಗರಿಕರ ಸುರಕ್ಷತೆಗಾಗಿ ದೇವರನ್ನು ಪ್ರಾರ್ಥಿಸುತ್ತೇನೆ, ಎಲ್ಲರೂ ಎಚ್ಚರವಾಗಿರಿ, ಎಲ್ಲಾ ಜಿಲ್ಲೆಗಳಿಂದ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.