ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಘಟಕದಿಂದ ಶೃಂಗೇರಿಯ ಬಾಕುರ್ಡಿ ಗದ್ದೆಯಲ್ಲಿ ಆ.6ರಂದು ಬೆಳಿಗ್ಗೆ 9ಗಂಟೆಗೆ ಪುರುಷರು ಮತ್ತು ಮಹಿಳೆಯರ ಕೆಸರುಗದ್ದೆಓಟ, ಹಗ್ಗಜಗ್ಗಾಟ ಮತ್ತು ನೀರು ತುಂಬುವ ಸ್ಪರ್ಧೆಗಳು ನಡೆಯಲಿವೆ.
ಕೂತಗೋಡು ಗ್ರಾ.ಪಂ. ಅಧ್ಯಕ್ಷ ಕೆ.ಬಿ.ನಾಗೇಶ್ ಸ್ಪರ್ಧೆಗಳನ್ನು ಉದ್ಘಾಟಿಸಲಿದ್ದು, ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷೆ ಕೌಸ್ತುಭಾ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಂಗುರ್ಡಿ ದಿನೇಶ್, ಆಗುಂಬೆ ಗಣೇಶ್, ಕೆ.ಎಂ.ರಮೇಶ್ ಭಟ್, ಎಸ್.ಪಿ.ರಮೇಶ್, ಶಕುಂತಲಾ, ವಿಜಯಕುಮಾರ್ ಭಾಗವಹಿಸಲಿದ್ದಾರೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ತಿಳಿಸಿದ್ದಾರೆ.
ಆಧುನಿಕತೆಯಿಂದಾಗಿ ಕಣ್ಮರೆಯಾಗುತ್ತಿರುವ ಮಲೆನಾಡಿನ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಹೇಳಿದ್ದಾರೆ.
500ಕ್ಕೂ ಹೆಚ್ಚು ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದು, ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದಿದ್ದಾರೆ.










