ಆಕ್ಷೇಪಾರ್ಹ ಹೇಳಿಕೆ : ನೂಪುರ್ ಶರ್ಮಾ ಪರ ನಿಂತ ಕಂಗನಾ ರಣಾವತ್.

122
firstsuddi

ಹೈದರಾಬಾದ್: ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಪರ ಬಾಲಿವುಡ್ ನಟಿ ಕಂಗನಾ ರಣಾವತ್ ನಿಂತಿದ್ದಾರೆ. ಈ ಕುರಿತು ಇನ್ ಸ್ಟಾಗ್ರಾಮ್ ಪೋಸ್ಟ್ ವೊಂದನ್ನ ಹಾಕಿದ್ದಾರೆ.

‘ನೂಪುರ್ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಂಪೂರ್ಣ ಅರ್ಹತೆ ಹೊಂದಿದ್ದಾರೆ. ಅವರಿಗೆ ಎಲ್ಲೆಡೆಯಿಂದ ಬರುತ್ತಿರುವ ಬೆದರಿಕೆ ಕರೆಗಳನ್ನ ನಾನು ನೋಡುತ್ತಿದ್ದೇನೆ. ನಿತ್ಯ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದಾಗ ನಾವು ನ್ಯಾಯಾಲಯ ಮೊರೆ ಹೋಗುತ್ತೇವೆ. ಈ ವಿಚಾರದಲ್ಲೂ ಅದನ್ನೇ ಅನುಸರಿಸಿ. ಇದು ಅಫ್ಘಾನಿಸ್ತಾನ ಅಲ್ಲ, ನಮ್ಮಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯೊಂದಿಗೆ ಸರಿಯಾಗಿ ಕಾರ್ಯನಿರ್ವಹಿಸುವ ಸರ್ಕಾರವಿದೆ. ಮರೆತಿರುವವರಿಗೆ ಇದನ್ನು ನೆನಪಿಸಿದೇನಷ್ಟೇ’ ಎಂದಿದ್ದಾರೆ.