ನವದೆಹಲಿ : ಆಗಸ್ಟ್ ನಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಸಿಗುವ ನಿರೀಕ್ಷೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡೊವೀಯ ಅವರು ಇಂದು ಸಂಸದ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಮೂರನೇ ಅಲೆ ಮಕ್ಕಳ ಮೇಲೆಯೇ ನೇರ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ತಜ್ಞರು ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ. ದೇಶದ ಹಲವೆಡೆ ವಿವಿಧ ಹಂತಗಳಲ್ಲಿ ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆಯುತ್ತಿದೆ. ಭಾರತ್ ಬಯೋಟೆಕ್ ಸಹ ಲಸಿಕೆಯ ಪ್ರಯೋಗ ನಡೆಸಿದ್ದು, ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಫಲಿತಾಂಶ ಲಭ್ಯವಾಗುವ ಸಾಧ್ಯತೆಗಳಿವೆ. ಕೊವಾಕ್ಸಿನ್ ಜೊತೆಗೆ, ಮಕ್ಕಳಿಗೆ ಜಾಯಿಡ್ಸ್ ಕ್ಯಾಡಿಲಾ ಲಸಿಕೆಯ ಪ್ರಯೋಗಗಳು ಪ್ರಸ್ತುತ ದೇಶದಲ್ಲಿ ನಡೆಯುತ್ತಿವೆ.










