ಆಜಾನ್ ವಿರೋಧಿಸಿ ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳು.

82
firstsuddi

ಶ್ರೀನಗರ : ಸ್ಥಳೀಯ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಕೂಗುವುದನ್ನು ವಿರೋಧಿಸಿ ಜಮ್ಮುವಿನ ಗಾಂಧಿ ಮೆಮೊರಿಯಲ್ ಸರ್ಕಾರಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದಾರೆ.

ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮತ್ತು ಅದನ್ನು ತಡೆಯುವಲ್ಲಿ ಸ್ಥಳೀಯಾಡಳಿತ ವಿಫಲವಾಗಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಿದ್ದು, ಬಳಿಕ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.

ತರಗತಿಯಲ್ಲಿ ಕಲಿಕೆಗೆ ಮಸೀದಿಯ ಧ್ವನಿವರ್ಧಕದ ಸದ್ದು ಅಡಚಣೆ ಮಾಡುತ್ತಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದುಹಾಕಲು ಜಮ್ಮು ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ)ನಿರ್ಣಯ ಮಾಡಿದ ಕೆಲ ದಿನಗಳ ನಂತರ ಈ ಘಟನೆ ನಡೆದಿದೆ.