ಆಟೋ ಮೇಲೆ ಮರ ಬಿದ್ದು ಇಬ್ಬರು ಸಾವು…

54
firstsuddi

ಉಡುಪಿ: ಏಕಾಏಕಿ ಆರಂಭವಾದ ಬಿರುಗಾಳಿ, ಸಿಡಿಲು, ಮಳೆಯಿಂದಾಗಿ ಆಟೋ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಶಿರ್ವದಿಂದ ಕಾಪು ಕಡೆ ಸಂಚರಿಸುತ್ತಿರುವಾಗ ಘಟನೆ ಸಂಭವಿಸಿದ್ದು, ಚಲಿಸುತ್ತಿದ್ದ ಆಟೋದ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಾದೂರು ಕುರಾಲು ನಿವಾಸಿ ಪುಷ್ಪಾ ಕುಲಾಲ್ ಮತ್ತು ಕಳತ್ತೂರು ನಿವಾಸಿ ಕೃಷ್ಣ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.