ಆದಿಗುರು ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ.

95
firstsuddi

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥನ ಸನ್ನಿಧಿಯಲ್ಲಿರುವ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಿದ್ದಾರೆ.

ಇಂದು ಕೇದಾರನಾಥಕ್ಕೆ ಭೇಟಿ ನೀಡಿದ ಮೋದಿ, ಮೊದಲಿಗೆ ಶಿವನಿಗೆ ಪ್ರಾರ್ಥನೆ ಸಲ್ಲಿಸಿ ಬಳಿಕ, ದೇಗುಲದ ಹಿಂದೆ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಪ್ರತಿಷ್ಠಾಪಿಸಿರುವ ಆದಿಗುರು ಶಂಕರಾಚಾರ್ಯ ಅವರ ಪುತ್ಥಳಿ ಅನಾವರಣಗೊಳಿಸಿದರು.

2013ರಲ್ಲಿ ಉಂಟಾದ ಪ್ರವಾಹದಲ್ಲಿ ಶಂಕರಾಚಾರ್ಯರ ಪ್ರತಿಮೆಗೆ ಹಾನಿಯಾಗಿತ್ತು. ಇದೀಗ ಪುನರ್ ನಿರ್ಮಾಣ ಮಾಡಲಾಗಿದ್ದು, ಅದನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ.

ಶಂಕರಚಾರ್ಯರ ಸುಂದರ ಪುತ್ಥಳಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ್ದು, ಸುಮಾರು 12 ಅಡಿ ಎತ್ತರವಿದ್ದು, ಕುಳಿತ ಭಂಗಿಯಲ್ಲಿದೆ. 35 ಟನ್ ತೂಕದ ಪುತ್ಥಳಿ ಕೆತ್ತಲು ಹೆಗ್ಗಡದೇವನಕೋಟೆಯಿಂದ ತರಲಾದ 120 ಟನ್ ನ ಕೃಷ್ಣ ಶಿಲೆ ಬಳಸಲಾಗಿದೆ.

ಮಂದಾಕಿನಿ ರಿಟೈನಿಂಗ್ ವಾಲ್ ಆಸ್ಥಾಪಥ್, ಸರಸ್ವತಿ ರಿಟೈನಿಂಗ್ ವಾಲ್ ಆಸ್ಥಾಪಥ್ ಮತ್ತು ಘಾಟ್‌ಗಳು, ತೀರ್ಥ ಪುರೋಹಿತ ಮನೆಗಳು ಮತ್ತು ಮಂದಾಕಿನಿ ನದಿಯ ಗರುಡ್ ಚಟ್ಟಿ ಸೇತುವೆಗಳು ಮೊದಲಾದ 130 ಕೋಟಿ ಮೌಲ್ಯದ 5 ಯೋಜನೆಯನ್ನು  ಪ್ರಧಾನಿ ಮೋದಿಯವರು ಉದ್ಘಾಟಿಸಿದ್ದಾರೆ.