ಹಾಸನ: ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ತಾಲೂಕಿನ ವಡೂರು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ನಿನ್ನೆ ಗಂಡನ ಮನೆಯಿಂದ ತಾಯಿ ಮನೆಗೆ ಬಂದಿದ್ದ ಕವಿತಾ, ಮನೆ ಹಿಂದೆ ಇದ್ದ ಜಮೀನಿಗೆ ಹೋಗಿದ್ದಾಗ ಆನೆ ದಾಳಿ ಮಾಡಿದೆ.
ತಕ್ಷಣ ಕುಟುಂಬಸ್ಥರು ಆಕೆಯನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.










