ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿ ಯುವತಿ ಸಾವು…

74
firstsuddi

ತಿರುವನಂತಪುರ : ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ತಿಂದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

ಕೇರಳದ ಪೆರುಂಬಳದ ಅಂಜು ಶ್ರೀಪಾರ್ವತಿ ಅವರು ಡಿಸೆಂಬರ್ 31 ರಂದು ಕಾಸರಗೋಡಿನ ರೋಮ್ಯಾನ್ಸಿಯಾ ಎಂಬ ರೆಸ್ಟೋರೆಂಟ್ ನಿಂದ ಆನ್‌ಲೈನ್‌ನಲ್ಲಿ ಖರೀದಿಸಿದ ಕುಜಿಮಂತಿ ಬಿರಿಯಾನಿಯನ್ನು ಸೇವಿಸಿದ್ದರು. ನಂತರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತನಿಖೆಗೆ ಆದೇಶಿಸಿದ್ದಾರೆ.