ಆನ್‍ಲೈನ್ ಗೇಮಿಂಗ್​ಗೆ ಗ್ರೀನ್‍ಸಿಗ್ನಲ್ ನೀಡಿದ ಹೈಕೋರ್ಟ್ – ಸರ್ಕಾರದ ಆದೇಶ ರದ್ದು…

89
firstsuddi

ಬೆಂಗಳೂರು : ಆನ್‍ಲೈನ್ ಗೇಮಿಂಗ್​ಗೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಕರ್ನಾಟಕ ಹೈಕೋರ್ಟ್ ಸರ್ಕಾರದ ಆದೇಶವನ್ನು ರದ್ದು ಪಡಿಸಿದೆ.

ಸರ್ಕಾರ ಆನ್‍ಲೈನ್ ಗೇಮ್ ನಿಷೇಧಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

ಸರ್ಕಾರದ ಕ್ರಮ ಸಂವಿಧಾನಬದ್ಧವಾಗಿಲ್ಲ. ಆನ್ ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.

ರಾಜ್ಯ ಸರ್ಕಾರ ಆನ್ ಲೈನ್ ಜೂಜು ರದ್ದುಪಡಿಸಲು ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದಿತ್ತು. ತಿದ್ದುಪಡಿ ಕಾಯ್ದೆಯನ್ನು 2021ರ ಸೆಪ್ಟೆಂಬರ್ 21ರಂದು ವಿಧಾನಸಭೆ ಮತ್ತು ಸೆ.23ರಂದು ವಿಧಾನಪರಿಷತ್ ಅಂಗೀಕರಿಸಿತ್ತು. 2021ರ ಅಕ್ಟೋಬರ್ 4ರಂದು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದರು. ಅದರಂತೆ ಅಕ್ಟೋಬರ್ 5ರಂದು ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತ್ತು.