ಆಫ್ರಿಕನ್ ಆನೆ ದತ್ತು ಪಡೆದು ದರ್ಶನ್ ಅವರ ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್ ಉಪೇಂದ್ರ!

89
firstsuddi

ಬೆಂಗಳೂರು : ಕೊರೊನಾ ಆರ್ಭಟ ಜೋರಾಗಿದ್ದು, ಲಾಕ್ ಡೌನ್ ಜಾರಿ ಮಾಡಲಾಗಿದೆ. ಹೀಗಾಗಿ ಝೂನಲ್ಲಿರುವ ಪ್ರಾಣಿ, ಪಕ್ಷಿಗಳ ನಿರ್ವಹಣೆ ಕಷ್ಟವಾಗಿದೆ. ಈ ಕಾರಣಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇತ್ತೀಚಿಗೆ ಪ್ರಾಣಿಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿಕೊಂಡಿದ್ದರು. ಇವರ ಮನವಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರು ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಅವರ ಕಾರ್ಯಕ್ಕೆ ಉಪ್ಪಿ ಕೈ ಜೋಡಿಸಿದ್ದಾರೆ.

ಪ್ರಾಣಿಗಳೇ ಗುಣದಲಿ ಮೇಲು, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಘಾಲಯ ದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು ಈ ಮೂಲಕ ದರ್ಶನ್ ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ ಎಂದು ಉಪೇಂದ್ರ ಅವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೂ ಉಪೇಂದ್ರ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ದರ್ಶನ್, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಶ್ರೀ ಉಪೇಂದ್ರ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.