ಆರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ.

66
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 6 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಹತ್ಯೆಗೀಡಾದ ನಾಲ್ವರು ಪಾಕಿಸ್ತಾನಿ ಮೂಲದ ಭಯೋತ್ಪಾದಕರಾಗಿದ್ದು, ಇಬ್ಬರು ಸ್ಥಳೀಯ ಉಗ್ರರಾಗಿದ್ದಾರೆ. ಅನಂತ್ ನಾಗ್ ನ ನೌಗಾಮ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ಸಂದರ್ಭದಲ್ಲಿ ಪೊಲೀಸರೊಬ್ಬರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಶ್ಮೀರದ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ವಿಜಯ್ ಕುಮಾರ್ ಮಾತನಾಡಿ, ದಕ್ಷಿಣ ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಿನ್ನೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಭಯೋತ್ಪಾದಕರು, ಜೈಶ್-ಎ-ಮೊಹಮ್ಮದ್ ಗುಂಪಿನವರಾಗಿದ್ದರು. ಈ ಕಾರ್ಯಾಚರಣೆಯು ಭದ್ರತಾ ಪಡೆಗಳ ದೊಡ್ಡ ಯಶಸ್ಸು ಎಂದು ಹೇಳಿದ್ದಾರೆ.