ನವದೆಹಲಿ : ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಮಧ್ಯಂತರ ಜಾಮೀನು ನೀಡಿದೆ.
ಉತ್ತರ ಪ್ರದೇಶದ ಸೀತಾಪುರದಲ್ಲಿ ಅವರ ವಿರುದ್ಧ ದಾಖಲಾದ ದೂರಿಗೆ ಸಂಬಂಧಿಸಿದಂತೆ ಈ ಜಾಮೀನು ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಟ್ವೀಟ್ ನಲ್ಲಿ ಹಿಂದೂ ದಾರ್ಶನಿಕರನ್ನು ‘ದ್ವೇಷ ಪ್ರಚೋದಕರು’ ಎಂದು ಟೀಕಿಸಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ ಐಆರ್ ನ್ನು ವಜಾಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವುದೇ ಹೊಸ ಟ್ವೀಟ್ ನ್ನು ಪೋಸ್ಟ್ ಮಾಡಬಾರದು ಹಾಗೂ ಸೀತಾಪುರ ನ್ಯಾಯಾಲಯ ವ್ಯಾಪ್ತಿಯಿಂದ ಹೊರಗೆ ಹೋಗಕೂಡದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.










