ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ-ಹಲ್ಲೆ ನಡೆಸಿದವರ ಮೇಲೆ ಕಾನೂನು ರೀತಿಯ ಕ್ರಮಕೈಗೊಳ್ಳುವುದಾಗಿ ಶ್ರಿರಾಮುಲು ಎಚ್ಚರಿಕೆ…

127
firstsuddi

ಬೆಂಗಳೂರು : ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಮ್ಮ ಟ್ವಿಟರ್ ಮೂಲಕ ಹಲ್ಲೆ ಮಾಡಿದವರ ಮೇಲೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. “ ಮನೆ ಬಾಗಿಲಿಗೆ ಬಂದು ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್‍ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ ಎಚ್ಚರವಿರಲಿ!! ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಚ್ಚರಿಸಿದ್ದಾರೆ.