ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ-ಸರಣಿಯಿಂದ ರೋಹಿತ್ ಔಟ್…

193
firstsuddi

ನವದೆಹಲಿ : ಆಸ್ಟ್ರೇಲಿಯಾ ವಿರುದ್ಧದ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಗೆ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮಾ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದ ಐಪಿಎಲ್ ಟೂರ್ನಿ ಪಂದ್ಯಗಳಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಸರಣಿ ನಡೆಯಲಿದ್ದು, ವಿರಾಟ್ ಕೊಹ್ಲಿ ಅವರು ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ ಹಾಗೂ ಕೆ.ಎಲ್. ರಾಹುಲ್ ಅವರು ಉಪ ನಾಯಕರಾಗಿರುತ್ತಾರೆ.

ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭ್ ಮನ್ ಗಿಲ್, ಕೆ.ಎಲ್ ರಾಹುಲ್(ಉಪ ನಾಯಕ ಹಗೂ ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಅಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ವೈ. ಚಹಾಲ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್

ಟಿ20 ತಂಡ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ವೈ ಚಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹಾರ್, ವರುಣ್ ಚಕ್ರವರ್ತಿ.

ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್ , ಚೇತೇಶ್ವರ್, ಅಜಿಂಕ್ಯಾ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭ್ ಮನ್ ಗಿಲ್, ಸಹಾ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್
ಪಂದ್ಯಗಳು ಸಿಡ್ನಿ ಮತ್ತು ಕ್ಯಾನ್ಬೆರಾದಲ್ಲಿ ನಡೆಯಲಿದ್ದು, ನಂತರ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಪ್ರವಾಸದ ದಿನಾಂಕಗಳು ಮತ್ತು ವೇಳಾಪಟ್ಟಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಿಲ್ಲ.